ಕೆ.ಆರ್.ಪುರ: ಕೆ.ಆರ್. ಪುರದ ರಾಷ್ಟ್ರೀಯ ಹೆದ್ದಾರಿ 75ರ ಮುಖ್ಯರಸ್ತೆಯಲ್ಲಿ ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಚರಣೆ.ತೆರವು ಕಾರ್ಯಚರಣೆಗೆ ವ್ಯಾಪಾರಿಗಳು ಜೆಸಿಬಿಗೆ ಅಡ್ಡವಾಗಿ ನಿಂತು ತೆರವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಬಿಬಿಎಂಪಿ, ಕೆ.ಆರ್.ಪುರ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಒತ್ತುವರಿ ತೆರವು ಕಾರ್ಯ ನಡೆದಿದ್ದು ಪಾದಚಾರಿ ಮಾರ್ಗ ಒತ್ತುವರಿಯಿಂದ ಸಂಚಾರ ದಟ್ಟಣೆ ಸಮಸ್ಯೆ ಸಹ ಉಂಟಾಗುತ್ತಿತ್ತು ಈ ಹಿನ್ನೆಲೆಯಲ್ಲಿ ಕಾರ್ಯಚರಣೆ ನಡೆಸಿ ತೆರವು ಗೊಳಿಸಲಾಗಿದೆ.
ಪಾದಚಾರಿ ಮಾರ್ಗದ ಒತ್ತುವರಿ ತೆರವು ಸಂಬಂಧಿಸಿದಂತೆ ಮುಂಗಡವಾಗಿ ನೋಟಿಸ್ ನೀಡಿದ್ದು,ಸಮಾಯವಾಕಾಶದ ನಂತರ ತೆರವು ಕಾರ್ಯಚರಣೆ ಮಾಡಲಾಗಿದೆ
ನೋಟಿಸ್ ಹಿನ್ನೆಲೆಯಲ್ಲಿ ಕೆಲವು ಅಂಗಡಿ ಮಾಲೀಕರು ಸ್ವಯಂ ಪ್ರೇರಿತರಾಗಿ ಪಾದಚಾರಿ ಮಾರ್ಗ ತೆರವು ಮಾಡಿಕೊಂಡಿದ್ದು,ಉಳಿದ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.