ಕೊಪ್ಪಳ: ಕೊಪ್ಪಳದಲ್ಲಿ ವೃದ್ಧೆ ಮನೆಗೆ 1 ಲಕ್ಷ ಕರೆಂಟ್ ಬಿಲ್ ಬಂದಿದ್ದು ವೃದ್ಧೆ ಗಿರಿಜಮ್ಮ ನಿವಾಸಕ್ಕೆ ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀ ಲನೆ ನಡೆಸಿದ್ದಾರೆ. ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್ ಭೇಟಿ ನೀಡಿದ್ದಾರೆ. 2021ರಿಂದ ಮೀಟರ್ ರೀಡಿಂಗ್ ತೊಂದರೆ ಯಿಂದ ಬಿಲ್ ಬಂದಿದೆ. ಅಜ್ಜಿ ಗಿರಿಜಮ್ಮ ವಿದ್ಯುತ್ ಬಿಲ್ ಪಾವತಿ ಮಾಡುವ ಅವಶ್ಯಕತೆ ಇಲ್ಲ.
ನಮ್ಮ ಸಿಬ್ಬಂದಿ ಹಾಗೂ ಬಿಲ್ ಕಲೆಕ್ಟರ್ ತಪ್ಪಿನಿಂದಾಗಿ ಹೀಗಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ. ಇಂತಹ ಯಾವುದೇ ಪ್ರಕರಣಗಳಿದ್ದರೂ ನಮ್ಮ ಗಮನಕ್ಕೆ ತನ್ನಿ ಎಂದು ಕೊಪ್ಪಳ ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್ ಸ್ಪಷ್ಟನೆ ನೀಡಿದ್ದಾರೆ. ಇನ್ನು ಕರೆಂಟ್ ಬಿಲ್ ಕಟ್ಟಬೇಕಿಲ್ಲ ಎಂದಿದ್ದಕ್ಕೆ ವೃದ್ಧೆ ಗಿರಿಜಮ್ಮ ಜೆಸ್ಕಾಂ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ರು.