ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ (Mungaru Rain) ಉತ್ತಮ ಮಳೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೆಆರ್ಎಸ್ (KRS) ಜಲಾಶಯದಲ್ಲಿ 2.50 ಅಡಿ ನೀರು ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ಎಸ್ ಡ್ಯಾಂಗೆ ಎರಡು ದಿನಗಳ ಅವಧಿಯಲ್ಲಿ 3 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್ಎಸ್ ಜಲಾಶಯಕ್ಕೆ (KRS Dam) ಒಳ ಹರಿವಿನ ಪ್ರಮಾಣವೂ ಹೆಚ್ಚಾಗಿದೆ. ಇದರಿಂದ 24 ಗಂಟೆಯಲ್ಲಿ 2.50 ಅಡಿ ನೀರು ಭರ್ತಿಯಾಗಿದೆ.
ಶನಿವಾರ ಬೆಳಗ್ಗೆ 82 ಅಡಿಯಷ್ಟಿದ್ದ ಜಲಾಶಯದ ನೀರಿನ ಮಟ್ಟ ಭಾನುವಾರ (ಜು.9) 84.50 ಅಡಿಗಳಿಗೆ ತಲುಪಿದೆ. ಕೆಆರ್ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಹೊಂದಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 12.915 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನ ಒಳಹರಿವು 14,556 ಕ್ಯೂಸೆಕ್ ಇದ್ದು, 367 ಕ್ಯೂಸೆಕ್ ಹೊರಹರಿವು ಇದೆ.
ಕೆಆರ್ಎಸ್ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 84.50 ಅಡಿಗಳು
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
ಇಂದಿನ ಸಾಮರ್ಥ್ಯ – 12.915 ಟಿಎಂಸಿ
ಒಳ ಹರಿವು – 14,556 ಕ್ಯೂಸೆಕ್
ಹೊರ ಹರಿವು – 367 ಕ್ಯೂಸೆಕ್