ಬೆಂಗಳೂರು ;- ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಐದು ತಿಂಗಳ ನಂತರ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.
ಬರೋಬ್ಬರಿ ಐದು ತಿಂಗಳು ತನಿಖೆ ನಡೆಸಿದ್ದ ಗೋವಿಂದಪುರ ಠಾಣಾ ಪೊಲೀಸರು ಕನ್ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್ಸಿಎಲ್ ಇಂಜಿನಿಯರ್ಸ್ ಸೇರಿ 11 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ತಜ್ಞರ ವರದಿಗಳು, ಪೊಲೀಸರ ತನಿಖೆ ಹಾಗೂ ಎಫ್ಎಸ್ಎಲ್ ರಿಪೋರ್ಟ್ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಐಐಟಿ ರಿಪೋರ್ಟ್ ಮತ್ತು ಎಫ್ಎಸ್ಎಲ್ ರಿಪೋರ್ಟ್ ಚಾರ್ಜ್ ಶೀಟ್ನಲ್ಲಿ ಅಟ್ಯಾಚ್ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳ ಲೋಪ, ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ.
ಲೋಪ ಯಾರದ್ದು ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್ಎಸ್ಎಲ್ ರಿಪೋರ್ಟ್ ಪಡೆದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.