ಬೆಂಗಳೂರು ;- ಮುಸ್ಲಿಂರಿಗೆ ಹಿಂದಿನ ಸರ್ಕಾರದಿಂದ ಆತಂಕ, ಭಯವಿತ್ತು ಹೀಗಾಗಿ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಎಲ್ಲೋ ಒಂದು ಕಡೆ ಮುಸ್ಲಿಂರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು, ಭಯದ ವಾತಾವರಣ ಇತ್ತು. ಈ ಬಾರಿಯ ಚುನಾವಣೆಯಲ್ಲಿ ಅದೆಲ್ಲವನ್ನೂ ಮನಗಂಡು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ.
ಕಾಂಗ್ರೆಸ್ ಜ್ಯಾತ್ಯತೀತವಾದ ಪಕ್ಚ, ಹಾಗಾಗಿ ಅವರು ನಮ್ಮ ಜೊತೆ ನಿಂತಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಅಭಿವೃದ್ಧಿ ಜೊತೆಗೆ ಶಾಂತಿ ಕಾಪಾಡಬೇಕಿದೆ ಎಂದು ಸಲಹೆ ನೀಡಿದರು.
ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಉತ್ತಮವಾದ ಆಡಳಿತ ನೀಡುವುದು ಶತಸಿದ್ದ. ಒಟ್ಟೊಟ್ಟಿಗೆ ಎಲ್ಲ ಸಮುದಾಯಗಳನ್ನು ಅಭಿವೃದ್ಧಿ ಕಡೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.