ಬೆಂಗಳೂರು: ವಿಧಾನಸಭೆಯಲ್ಲಿ ನಮಾಜ್ಗೆ ಅವಕಾಶ ಕೊಡೋ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ಮಾತನಾಡಿ ವಿಧಾನಸೌಧ ಏನ ಮೆಕ್ಕಾ ಮದೀನಾ ? ಇದನ್ನೆನು ಮೆಕ್ಕಾ ಮದೀನಾ ಅಂತಾ ತಿಳಿದುಕೊಂಡಿದ್ದೀರಾ ? ಇದು ಡೆಂಜರಸ್ ಮಾನಸಿಕತೆ.
ವಿಧಾನಸೌಧ ಪವಿತ್ರ ದೇಗುಲ ಅಲ್ಲಿ ನಮಾಜ್ ಮಾಡ್ತೀರಾ ನೀವು. ಕಡತದಿಂದ ವಾಪಸ್ ಆ ಮಾತು ತಗಿಬೇಕು. ಅವರಿಗೆ ಶಿಕ್ಷೆಯಾಗಬೇಕು. ಇದೇ ಕೋಮುವಾದ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.
ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ವಿಧಾನಸೌಧದಲ್ಲಿ ನಮಾಜ್ ಗೆ ನಮಗೆ ವ್ಯವಸ್ಥೆ ಮಾಡಿಕೊಡಿ. ಒಂದು ಕೊಠಡಿ ಮೀಸಲಿಡಿ ಎಂದು ವಿಧಾನ ಪರಿಷತ್ ಸಭಾಪತಿಗಳಿಗೆ ಮನವಿ ಮಾಡಿದ್ದಾರೆ.
ಈ ವೇಳೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಭಾಧ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದು ನಾಯಕರ ಮಾತುಗಳನ್ನು ಕೇಳಿ ಅಧ್ಯಕ್ಷರ ಅಪೇಕ್ಷೆಯಂತೆ ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.