ಬೆಂಗಳೂರು: ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆದರೆ ಅವರದ್ದು ಸಮ್ಮಿಶ್ರ ಸರ್ಕಾರವಾಗಿದ್ದ ಕಾರಣ ಆ ಯೋಜನೆಗಳನ್ನು ಜಾರಿ ಮಾಡಲು ಬಿಡಲಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆಯಲಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ನಾನು ಈ ಹಿಂದೆ ಜಗದೀಶ್ ಶೆಟ್ಟರ್, ದೇವೇಗೌಡರು, ಎಸ್.ಎಂಕೃಷ್ಣ, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಇರಲಿಲ್ಲ. ಸಾಧ್ಯವಾದರೆ ಅವರನ್ನು ಭೇಟಿ ಮಾಡುತ್ತೇನೆ. ಎಲ್ಲರ ಅನುಭವ ಅವರ ವಿಚಾರಧಾರೆ ಕೇಳಿ ಪಡೆಯುತ್ತೇನೆ. ಇದರಲ್ಲಿ ರಾಜಕಾರಣ ಯಾಕೆ ಮಾಡಬೇಕು ಎಲ್ಲರ ಅಭಿಪ್ರಾಯ ತಿಳಿದರೆ ನನಗೆ ಉಪಯೋಗವಾಗುತ್ತದೆ ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಹೇಳಿದರು.