ಬೆಂಗಳೂರು: ನನ್ನ ಕ್ಷೇತ್ರದಲ್ಲಿ ಅಧಿಕಾರಿಗಳು ನಾನು ಶಾಸಕಿ ಆಗಿದ್ದರೂ ಶಿಷ್ಟಾಚಾರಕ್ಕಾದರೂ ಗೌರವ ಕೊಡುತ್ತಿಲ್ಲ. ನನ್ನ ಮಾತನ್ನು ಕೇಳುತ್ತಿಲ್ಲ. ನನಗೆ ಜನ ಸೇವೆ ಮಾಡಲು ಅವಕಾಶ ಕೊಡಬೇಕು ಎಂದು ವಿಧಾನಸಭೆಯಲ್ಲಿ ದೇವದುರ್ಗದ ಜೆಡಿಎಸ್ ಶಾಸಕಿ ಕರೆಮ್ಮ ಜಿ. ನಾಯಕ್ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.
ದೇವದುರ್ಗದಲ್ಲಿ ಅಕ್ರಮ ಮರಳು ದಂಧೆ ಮಿತಿ ಮೀರಿದೆ. ಅದನ್ನು ಬಂದ್ ಮಾಡಿಸುವ ಪ್ರಯತ್ನ ಮಾಡಿದೆ. ಕೆಲವರು ನನ್ನ ಮೇಲೆ ಲಾರಿ ಹತ್ತಿಸ್ತೀನಿ ಅಂತ ಮಾತಾಡ್ತಾರೆ ಅಂತಾ ಗಂಭೀರವಾದ ವಿಷಯವನ್ನು ಪ್ರಸ್ತಾಪ ಮಾಡಿದ್ರು.
ಮಾಜಿ ಶಾಸಕರ ಬೆಂಬಲಿಗರು ನಮ್ಮ ಮೇಲೆ ದಬ್ಬಾಳಿಕೆ ಮಾಡ್ತಿದ್ದಾರೆ. ಅಧಿಕಾರಿಗಳು ನಾನೊಬ್ಬ ಶಾಸಕಿ ಅನ್ನೋದನ್ನೇ ಪರಿಗಣಿಸದೇ ಪ್ರತಿಷ್ಠೆ ತೋರಿಸುತ್ತಿದ್ದಾರೆ. ಮಟ್ಕಾ ದಂಧೆ ಬಂದ್ ಮಾಡಿಸಿದರೂ ಪೊಲೀಸರು ಸಹಕಾರ ನೀಡ್ತಿಲ್ಲ. ಶಿಷ್ಟಾಚಾರಕ್ಕೂ ಪೊಲೀಸರು ಶಾಸಕಿ ಅಂತ ನನಗೆ ಗೌರವ ನೀಡ್ತಿಲ್ಲ ಅಂತಾ ಅಸಹಾಯಕತೆ ವ್ಯಕ್ತಪಡಿಸಿದ್ರು.