ಬೆಂಗಳೂರು: ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಇಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ 9 ನೇ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಪರಿಷತ್ ಸದಸ್ಯ ಟಿ.ಎ.ಶರವಣ ಭಾಗಿಯಾಗಿದ್ದಾರೆ.
ಯೋಗವು ದೇಹ, ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸುವಂತೆ ಮನವಿ ಮಾಡಿದರು. ಈ ನಿರ್ಣಯಕ್ಕೆ ನೂರಾರು ದೇಶಗಳು ಬೆಂಬಲಿಸಿ ಯೋಗ ದಿನ ಆಚರಿಸುತ್ತಿವೆ. ಯೋಗದ ಮೂಲಕ ಮನುಕುಲವನ್ನು ಬೆಸೆಯಬೇಕಾಗಿದೆ ಎಂದು ತಿಳಿಸಿದರು.
ಯೋಗದಿಂದ ದೇಹಕ್ಕೆ ಏನೇಲ್ಲ ಲಾಭವಿದೆ ಗೊತ್ತಾ?
ಯೋಗ ಮಾಡುವುದು ಒತ್ತಡವನ್ನು ನಿವಾರಿಸುವ ಮೂಲಕ ಉತ್ತಮ ಆರೋಗ್ಯವನ್ನು ಬೆಂಬಲಿಸುತ್ತದೆ. ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯ, ನಿದ್ರೆ, ದೇಹ ಸಮತೋಲನವನ್ನು ಸುಧಾರಿಸುತ್ತದೆ. ಬೆನ್ನು ನೋವು, ಕುತ್ತಿಗೆ ನೋವು, ತಲೆನೋವಿನ ಸಮಸ್ಯೆಗಳಿಗೆ ಯೋಗವು ಒಳ್ಳೆಯ ಪರಿಹಾರವಾಗಿದೆ. ಬೊಜ್ಜು ಮತ್ತು ಅಧಿಕ ತೂಕವನ್ನು ಕಡಿಮೆಗೊಳಿಸುವಲ್ಲಿ ಸಹಾಯ ಮಾಡುತ್ತದೆ. ವ್ಯಸನಗಳಿಂದ ಮುಕ್ತಿಪಡೆಯಲು ಒಳ್ಳೆಯ ಅಭ್ಯಾಸವಾಗಿದೆ. ಖಿನ್ನತೆ ಮತ್ತು ಆತಂಕದ ಸಮಸ್ಯೆಗಳನ್ನು ನಿವಾರಿಸುವಲ್ಲಿ ಉಪಯುಕ್ತವಾಗಿದೆ.
ರಾಜ್ಯಪಾಲರಾದ ಶ್ರೀ.ಥಾವರ್ ಚಂದ್ ಗೆಹ್ಲೋಟ್, ಆರೋಗ್ಯ ಸಚಿವರಾದ ಶ್ರೀ.ದಿನೇಶ್ ಗುಂಡೂರಾವ್, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆದ ಶ್ರೀ.ಯುಟಿ ಖಾದರ್, ಭಾರತದ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ಕ್ರಿಕೆಟರ್ ಶ್ರೀ.ವೆಂಕಟೇಶ್ ಪ್ರಸಾದ್ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು