ಬೆಳಗಾವಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ (Jain Muni’s murder)ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜೈನ ಸಮುದಾಯದ ಮುಖಂಡರು, ಜೈನ ಮುನಿಗಳು ಸೇರಿ ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನೆಗೆ ಪ್ಲ್ಯಾನ್ ಮಾಡಿದ್ದು, ಹಲಗಾ ಗ್ರಾಮದ 108ನೇ ಸಿದ್ದಸೇನ ಮಹಾರಾಜ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ವೇಳೆ ಶ್ರಾವಕ್, ಶ್ರಾವಿಕೆಯರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆಯಿದೆ.