ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ಐದು ದಿನಳಿಂದ ನಿರಂತರ ಮಳೆಯಾಗುತ್ತಿದ್ದು, 235 ಮಿಮೀವರೆಗೂ ಮಳೆಯ ಪ್ರಮಾಣ ದಾಖಲಾಗಿದೆ. ಇದರಿಂದ ಮಲಪ್ರಭಾ ನದಿಯ ಒಳ ಹರಿವು ಹೆಚ್ಚಳವಾಗಿದ್ದು, ಕಣಕುಂಬಿ ಗ್ರಾಮದ ರಸ್ತೆ ಮತ್ತು ಬ್ರಿಡ್ಜ್ಗಳು ಕೊಚ್ಚಿಹೋಗುತ್ತಿವೆ. ಇದರಿಂದ ರಸ್ತೆ ಸಂಪರ್ಕ ಕೂಡ ಸಂಪೂರ್ಣ ಬಂದ್ ಆಗಿದೆ.
ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿಯ (Belagavi) ಸುತ್ತಮುತ್ತ ಮಳೆ ಚುರುಕುಗೊಂಡಿದೆ. ಇದರಿಂದಾಗಿ ಗೋಕಾಕ್ ತಾಲೂಕಿನ ಘಟಪ್ರಭಾ ನದಿಯಲ್ಲಿ (Ghataprabha River) ನೀರಿನ ಪ್ರಮಾಣ ಹೆಚ್ಚಳವಾಗಿದೆ. ಪರಿಣಾಮ ಸೇತುವೆ ಜಲಾವೃತಗೊಂಡಿದ್ದು, ಅಪಾಯಕಾರಿ ಸೇತುವೆ ಮೇಲೆ ಬೈಕ್ ಸವಾರ ದಸ್ಸಾಹಸ ಪ್ರದರ್ಶನ ಮಾಡಿದ್ದಾನೆ.
ಸೇತುವೆ ಮೇಲೆ ತೆರಳದಂತೆ ಕರ್ತವ್ಯ ನಿರತ ಪೊಲೀಸ್ (Police) ಸಿಬ್ಬಂದಿ ಸೂಚಿಸಿದ್ದಾರೆ. ಆದರೂ ಬೈಕ್ ಸವಾರ ಪೊಲೀಸರ ಮಾತು ಕೇಳದೆ ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಬೈಕ್ ಸವಾರಿ ಮಾಡಿದ್ದಾನೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.