ಧಾರವಾಡ: ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಅವರು ದೀಪಕ್ ಚಿಂಚೋರೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆ ವತಿಯಿಂದ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಸಚಿವ ಸಂತೋಷ ಲಾಡ್ ಧನಾತ್ಮಕವಾಗಿ ಸ್ಪಂದಿಸಿ ತಕ್ಷಣವೇ ಸಭೆಯನ್ನು ಕರೆದು ಸಂಪೂರ್ಣವಾಗಿ ಮಾಹಿತಿಯನ್ನು ಪಡೆದು ಸರ್ಕಾರ ಮಟ್ಟದಲ್ಲಿ ಆದಷ್ಟು ಬೇಗ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಈ ವೇಳೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆ ಪದಾಧಿಕಾರಿಗಳಿಗೆ ತಿಳಿಸಿದರು.
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಕ್ಕಾಗಿ ಸತತ ಪ್ರಯತ್ನ ಮಾಡುತ್ತಿರುವ ದೀಪಕ್ ಚಿಂಚೋರೆಯವರು ಮಾತನಾಡಿ ಪ್ರತ್ಯೇಕ ಪಾಲಿಕೆ ಮಾಡಿಸುವುದು ತುಂಬಾ ಮುಖ್ಯವಾಗಿದ್ದು, ಆದಷ್ಟು ಬೇಗ ಎಲ್ಲ ಹಿರಿಯ ಸಚಿವರನ್ನು ಭೇಟಿಯಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು. ನಿಯೋಗದಲ್ಲಿ ವೆಂಕಟೇಶ್ ಮಚಕನೂರ್, ರವಿಕುಮಾರ್ ಮಾಳಿಗೇರ, ಶಂಕರ್ ನೀರಾವರಿ, ವಸಂತ ಅರ್ಕಾಚಾರ, ನಾಗೇಶ ಕಟಕೊಳ, ಸತೀಶ್ ನಾಯ್ಕರ್, ಭಿಮಶೆನ್ ಕಾಗಿ, ಶಿವಕಿರಣ್ ಅಗಡಿ, ಶಾಂತವೀರ ಬೆಟಗೇರಿ ಹಾಗೂ ಇತರರು ಹಾಜರಿದ್ದರು.