ನವದೆಹಲಿ: ಯಾರನ್ನೂ ಕೇಳದೆ ಸಿದ್ದರಾಮಯ್ಯ ಅಕ್ಕಿ ಘೋಷಣೆ ಮಾಡಿದ್ದಾರೆ. ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ನವದೆಹಲಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೂ ಹೆಚ್ಚುವರಿ ಅಕ್ಕಿ ಕೊಟ್ಟಿಲ್ಲ. ನೈಸರ್ಗಿಕ ವಿಕೋಪ, ತುರ್ತು ಪರಿಸ್ಥಿತಿಯಲ್ಲಿ ಅಕ್ಕಿ ಕೊಡಬೇಕು. ಕೇಂದ್ರದ ಬಳಿ ಅಕ್ಕಿ ಇದ್ದರೆ ಕೊಡುತ್ತಿದ್ದೆವು ಎಂದಿದ್ದಾರೆ