ಬೆಂಗಳೂರು: ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಷಿಯೇಷನ್ ಅವರ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿತು.
ರಾಜ್ಯದಲ್ಲಿ 2863 ವೈನ್ ಅಂಗಡಿಗಳು ಹೆಚ್ಚಾಗಿದ್ದು, ಮಾರಾಟ ಕಡಿಮೆಯಾಗಿದೆ. ಡಿಸ್ಟಿಲರಿಗಳು, ಅಬಕಾರಿ, ಚಿಲ್ಲರೆ ವ್ಯಾಪಾರಿಗಳ ಮಧ್ಯೆ ಸಮನ್ವಯದ ಕೊರತೆಯಿದ್ದು, ಸಮನ್ವಯ ಸಮಿತಿ ರಚಿಸಿದರೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಈ ಕುರಿತು ಬಜೆಟ್ ಅಧಿವೇಶನದ ನಂತರ ಸಭೆ ಕರೆದು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವ ಭರವಸೆ ನೀಡಿದ ಮುಖ್ಯ ಮಂತ್ರಿಗಳು, ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.