ರಾಯಚೂರು ;- ಹೆಚ್ಚುವರಿ ಬಸ್ ಬಿಡುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ABVP ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಜರುಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರದ ಶಕ್ತಿ ಯೋಜನೆಯಿಂದ ಹಳ್ಳಿಯ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಹಳ್ಳಿಗಳಿಂದ ಬಸ್ ನಲ್ಲಿ ಬರುವ ಶಾಲಾ ಕಾಲೇಜಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ.
ಫ್ರೀ ಬಸ್ ಇರುವುದರಿಂದ ಬಸ್ ಗಳು ಫುಲ್ ಆಗುತ್ತಿದ್ದು, ಯೋಜನೆ ಒಳ್ಳೆದಾಗಿದೆ ಆದರೆ ಹೆಚ್ಚುವರಿ ಬಸ್ ಕಳಿಸಿ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.