ಬೆಂಗಳೂರು ;- ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿರುದ್ದದ ಪ್ರಕರಣದ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ.
ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಬಿಐ ಪರ ವಕೀಲರು ಹಾಜರಾಗಿ, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಪುರಸ್ಕರಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು. ಅಲ್ಲದೇ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶಿಸಿತು.