ಬೆಂಗಳೂರು ;- ಬಿಸಿಯೂಟ ಕಾರ್ಯಕರ್ತೆಯರಿಗೆ ಬಳೆ ನಿಷೇಧ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ ಎನ್ನುವುದು ಸುಳ್ಳು ಸುದ್ದಿ. ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವಾಂಶವೇ ಬೇರೆ ಎಂದು ಸಿಎಂ ತಿಳಿಸಿದ್ದಾರೆ.
ವಾಸ್ತವವಾಗಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.