ಬೆಂಗಳೂರು: ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್ ಆರೋಪ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಹಾಗಾಗಿ ಈ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. ಪೊಲೀಸರು ಮೊಬೈಲ್ ವಶಪಡಿಸಿಕೊಳ್ಳುವ ಪ್ರಯತ್ನ ಏಕೆ ಮಾಡಿಲ್ಲ. ಈ ಘಟನೆಯನ್ನು ಖಂಡಿಸಿ ನಮ್ಮ ಕಾರ್ಯಕರ್ತೆ ಟ್ವೀಟ್ ಮಾಡಿದ್ರು.
ಆಕೆಯನ್ನು ಉಗ್ರಗಾಮಿಯ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಬಿ.ಸಿ.ನಾಗೇಶ್ ಕಿಡಿಕಾರಿದ್ದಾರೆ.