ಬೆಂಗಳೂರು;- ಗುರುವಾರ ದೆಹಲಿಗೆ ಹೋಗಿದ್ದ ಕಾರಣ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ..
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷದಿಂದ ಹಲವು ಯೋಜನೆಗಳಿಗೆ ಹಣ ಬಿಡುಗಡೆಯಾಗುವುದು ಕೇಂದ್ರ ಸರ್ಕಾರದಿಂದ ಬಾಕಿ ಇದೆ. ಕೇಂದ್ರ ರಾಜ್ಯ ಹೆದ್ದಾರಿ ಸಂಬಂಧ ಪ್ರಸ್ತಾವನೆಗಳು ಬೇರೆ ಬೇರೆ ರೀತಿ ಇದೆ. ಒನ್ ಟು ಒನ್ ಸಭೆ ಸಕ್ಸಸ್ ಆಗಿಲ್ಲ. ತಿಂಗಳಲ್ಲಿ ಎರಡು ಬಾರಿ ಸಭೆ ಮಾಡಿದ್ವಿ. 20 ಪ್ರಸ್ತಾವನೆಗಳು ಬಾಕಿ ಉಳಿದಿವೆ. ಶಿವಮೊಗ್ಗ, ಗದಗ, ರಾಯಚೂರು ರಿಂಗ್ ರೋಡ್ಗಳಿಗೆ ಪ್ರಪೋಸಲ್ ಬೇರೆ ಬೇರೆ ಇದೆ. ಬೇರೆ ಮಾದರಿಯಲ್ಲಿ ಪ್ರಸ್ತಾವನೆ ಕಳಿಸಿ ಅಂತಾ ಹೇಳಿದ್ದಾರೆ. ಈ ಬಗ್ಗೆ ಸಿಎಂ ತೀರ್ಮಾನ ಮಾಡಬೇಕು” ಎಂದರು.
ಬೆಂಗಳೂರಿನಲ್ಲಿ ಟನಲ್ ನಿರ್ಮಾಣಕ್ಕೆ ಚಿಂತನೆ ಇದೆ. ರಾಷ್ಟ್ರೀಯ ಹೆದ್ದಾರಿಯಿಂದಲೇ ಮಾಡುವ ಚಿಂತನೆ ಇದೆ. ನಮ್ಮಿಂದ ಎನ್ಒಸಿ ಆಗಬೇಕು ಅಷ್ಟೇ. ಪೀಣ್ಯ, ವೈಟ್ ಫೀಲ್ಡ್, ಕೆ.ಆರ್. ಪುರದಿಂದ ಮೇಕ್ರಿ ಸರ್ಕಲ್ವರೆಗೆ ಟನಲ್ ಆಗಬೇಕಿದೆ” ಎಂದು ಸಚಿವರು ಮಾಹಿತಿ ನೀಡಿದರು.