ಬೆಂಗಳೂರು: ನಾನು ಇವತ್ತು ಮೊದಲ ಬಾರಿಗೆ ಯೋಗ ಮಾಡಿದ್ದೇನೆ. ಇನ್ಮುಂದೆ ಮುಂದುವರಿಸಬೇಕು ಅಂತ ಅನ್ನಿಸುತ್ತಿದೆ. ಸಾವಿರಾರು ವರ್ಷಗಳಿಂದ ಯೋಗಾ ನಮ್ಮ ಸಂಸ್ಕೃತಿಯ ಒಂದು ಭಾಗವಾಗಿದೆ. ರಾಜಕಾರಣಿಗಳು, ಸರ್ಕಾರದಿಂದ ಯೋಗಕ್ಕೆ ಪಾಪ್ಯುಲಾರಿಟಿ ಬಂದಿಲ್ಲ. ಸಾವಿರಾರು ವರ್ಷಗಳ ಇತಿಹಾಸವನ್ನ ಯೋಗಾ ಹೊಂದಿದೆ ಎಂದು ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ರು.
CM Siddaramaiah Yoga: ವಿಧಾನಸೌಧದ ಮುಂದೆ ಸಿಎಂ ಸಿದ್ದರಾಮಯ್ಯ ಯೋಗ ಪ್ರದರ್ಶನ
ಯೋಗ- ವಸುದೈವ ಕುಟುಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಮಾಡಲಾಗುತ್ತಿದೆ.
ವಿಧಾನಸೌಧದ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಲಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.