ಬೆಂಗಳೂರು: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿರುವ ಅಂಗನವಾಡಿಗಳ ಕೇಂದ್ರಗಳ ಸಂಖ್ಯೆ ಹಾಗೂ ಮಕ್ಕಳ ಸಂಖ್ಯೆ ಎಷ್ಟಿದೆ ವೈ ಎ ನಾರಾಯಣಸ್ವಾಮಿ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 67570 ಅಂಗನವಾಡಿ ಕೇಂದ್ರಗಳು 2329 ಮಿನಿ ಅಂಗನವಾಡಿ ಕೇಂದ್ರಗಳು 6 ತಿಂಗಳಿಂದ 3 ವರ್ಷದ 22,12,653 ಮತ್ತು 3 ರಿಂದ 6 ವರ್ಷದ 17,37,526 ಮಕ್ಕಳು ಒಟ್ಟು ಜಿಲ್ಲಾವಾರು 39,50,179 ಮಕ್ಕಳು ದಾಖಲಾಗಿವೆ ಎಂದು ತಿಳಿಸಿದರು.
ವಿಧಾನಸಭೆ ಅಧಿವೇಶನ ಆರಂಭವಾಗಿದ್ದು,ಸದನಕ್ಕೆ ಸ್ಪೀಕರ್ ಯುಟಿ ಖಾದರ್ ಆಗಮಿಸುತ್ತಿದ್ದಂತೆ ಆ ಕಡೆಯೇ ಗಮನ ಹರಿಸುತ್ತಿದ್ದೀರಾ ಎಂದ ಆಡಳಿತ ಪಕ್ಷದ ಸದಸ್ಯರು ಪ್ರಶ್ನಿಸಿದರು. ಈ ವೇಳೆ ಸ್ಪೀಕರ್ ಯುಟಿ ಖಾದರ್ ನಾನು ವಿಪಕ್ಷಗಳ ಮಿತ್ರ ಎಂದಿದ್ದಾರೆ.