ಬೆಂಗಳೂರು: ತುಮಕೂರಿನಲ್ಲಿ ತಮಗೆ ಕಣ್ಣೀರು ಹಾಕಿಸಿದವರನ್ನು ಸೋಲಿಸಿ ಎಂದು ಹೆಚ್ ಡಿಡಿ ಕರೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Sivakumar) ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು, ಅವರ ಭಾವನೆ,ಅವರ ಅನುಭವ ಅವರ ಹಿರಿತನಕ್ಕೆ ನಾವು ಸ್ಪರ್ಧೆ ಮಾಡೋಕೆ ಆಗುತ್ತಾ. ನಮ್ಮ ಕೈಯಲ್ಲಿ ಸ್ಪರ್ಧೆ ಮಾಡೋಕೆ ಆಗಲ್ಲಪ್ಪ. ಅವರಿಗೆ ಒಳ್ಳೆಯದಾಗಲಿ ಎಂದರು. ಇಷ್ಟು ವಯಸ್ಸು ಆದ್ರು,ಇಷ್ಟು ದೊಡ್ಡ ಚುನಾವಣಾ ಪ್ರಚಾರ ಮಾಡ್ತಾ ಇದ್ದಾರೆ. ಅವರಿಂದ ಕಲಿಯಬೇಕಾಗಿರುವುದು ಬಹಳಷ್ಟು ಇದೆ. ಅವರ ಛಲ ಹೋರಾಟ, ಆರೋಗ್ಯ ಚನ್ನಾಗಿ ಇರ್ಲಿ ಒಳೆಯದಾಗಲಿ ಎಂದರು. ಇನ್ನೂ ಕಳೆದ ಮೂರ್ನಾಲ್ಕು ದಿನದ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು(HD Deve Gowda), ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ
ಪ್ರಚಾರದ ವೇಳೆ ಮಾತನಾಡುತ್ತಾ, ನಾನು ಹಿಂದೆ ನಡೆದಿದ್ದನ್ನು ಮೆಲುಕು ಹಾಕಿ ನೋಡಲೂ ಹೋಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದುಕೊಂಡಿರಲಿಲ್ಲ. ಚುನಾವಣಾ ರಾಜಕೀಯ ಸಾಕಾಗಿದೆ ಅಂತಾ ಹಿಂದೆಯೇ ಹೇಳಿದ್ದೆ. ತುಮಕೂರಿನ ಕೆಲವು ಮುಖಂಡರು ನನ್ನನ್ನು ಬಲಿಪಶು ಮಾಡಿದ್ರು ಅಂತಾ ಹೇಳಲ್ಲ. ಅವರ ಹೆಸರು ಕೂಡ ಹೇಳೋಕೆ ಹೋಗಲ್ಲ. ಆದರೆ ಸಂಸತ್ತಿನಲ್ಲಿ ನಿಂತು ಕಣ್ಣೀರು ಹಾಕುವ ಕೆಟ್ಟ ಸಂದರ್ಭ ತಂದರು. ಆ ನಾಯಕನ ಕಣ್ಣಲ್ಲಿ ನೀರು ತರಿಸಬೇಕು, ಆಗ ನನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಹೇಳಿದರು.