ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಎಂಬಿ ಪಾಟೀಲ್ ಹೇಳಿಕೆಗೆ ನಟ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಸೂಲಿಬೆಲಿ ಅವರು ಯಾವ ಅಧಿಕಾರದ ಹಿಂದೆ ಹೋಗದೇ ಸಾಂಸ್ಕೃತಿಕ, ತತ್ವ, ವಿಚಾರ, ಕೆರೆ-ಕಟ್ಟೆ ಪುನರುಜ್ಜೀವನ, ಪ್ರವಚನ ಮಾಡುವ ಸಾತ್ವಿಕ ಚಿಂತಕ ಅವರನ್ನು ಜೈಲಿಗೆ ಹಾಕುವೆ ಎಂದಿದ್ದಾರೆ.
ಗೆದ್ದು ತಿಂಗಳಿಗೇ ಈ ಮಾತು!. ಮಾನ್ಯರೇ ಕಾನೂನು ನಿಮ್ಮ ಜೇಬಲ್ಲಿ ಇದೆಯೇ? ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ ಅವರ ಬೆನ್ನಿಗೆ ಎಂದು ಸೂಲಿಬೆಲಿ ಪರ ಬ್ಯಾಟ್ ಬೀಸಿದ್ದಾರೆ. ಇನ್ನೂ ಜಗ್ಗೇಶ್ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಜಾಗ ಮಾಡಿಕೊಟ್ಟಿದೆ. ಕೆಲವರು ಜಗ್ಗೇಶ್ ಪರವಾಗಿ ಕಾಮೆಂಟ್ ಮಾಡಿದರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.