ರಮೇಶ್ ಅರವಿಂದ್ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಖ್ಯಾತಿ ಕಾರ್ಯಕ್ರಮ ವೀಕೆಂಡ್ ವಿಥ್ ರಮೇಶ್ ಈ ವಾರ ಮುಕ್ತಾಯವಾಗಲಿದೆ. ಈ ಬಾರಿ ಅತೀ ವೇಗದಲ್ಲಿ ಈ ಕಾರ್ಯಕ್ರಮವನ್ನು ಮುಗಿಸಿದೆ ಜೀ ಕನ್ನಡ ವಾಹಿನಿ. ಮೊದಲ ಸೀಸನ್ ನಿಂದ ಈ ಸೀಸನ್ ವರೆಗೂ ಒಟ್ಟು 100 ಸಾಧಕರು ವೀಕೆಂಡ್ ಕುರ್ಚಿ ಮೇಲೆ ಕೂತು ತಮ್ಮ ಸಾಧನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ಈ ಶನಿವಾರ ಹಾಗೂ ಭಾನುವಾರ ಪ್ರಸಾರವಾಗುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ ಈ ಸೀಸನ್ ಮುಗಿಯಲಿದೆ.
ಈಗಾಗಲೇ ಡಿಕೆಶಿ ಅವರ ಎಪಿಸೋಡ್ ನ ಪ್ರೊಮೋ ಕೂಡ ರಿಲೀಸ್ ಆಗಿದ್ದು, ಪ್ರೊಮೋನಲ್ಲೇ ‘ಗ್ರ್ಯಾಂಡ್ ಫಿನಾಲೆ’ ಎಂದು ಹಾಕಲಾಗಿದೆ. ಸಾಧಕರ ಸೀಟಿನಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.
ನಾನು 7ನೇ ತರಗತಿಯಲ್ಲಿ ಇರುವಾಗಲೇ ರಾಜಕಾರಣಿ ಆಗಬೇಕು ಎಂದು ತೀರ್ಮಾನ ಮಾಡಿದ್ದೆ ಎಂದು ಡಿಕೆಶಿ ಅವರು ಹೇಳಿದ್ದಾರೆ. ಬಳಿಕ ಡಿಕೆಶಿ, ಒಬ್ಬ ಒಳ್ಳೆಯ ಆಡಳಿತಗಾರ ಎಂದು ಸಿಎಂ ಸಿದ್ಧರಾಮಯ್ಯ ಬಣ್ಣಿಸಿದ್ದಾರೆ. ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದು ಡಿಕೆಶಿ ಪತ್ನಿ ಮಾತನಾಡಿದ್ದಾರೆ. ಪುತ್ರಿ, ನನ್ನ ತಂದೆಯೇ ನನ್ನ ಹೀರೋ ಎಂದು ಹೆಮ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನನ್ನ ನೋಡಿದ್ದರು. ಯೂ ಆರ್ ಸೆಲೆಕ್ಟೆಟೆಡ್ ಫಾರ್ ವರ್ಲ್ಡ್ ಯೂತ್ ಸ್ಟುಡೆಂಟ್ ಫೆಸ್ಟಿವಲ್ ಅಂದ್ರು. ಬೈ ಬರ್ತ್ ನಾನೊಬ್ಬ ರೈತ, ಆದರೆ ನನ್ನ ಆಸಕ್ತಿ ಇರೋದು ರಾಜಕಾರಣದಲ್ಲಿ ಎಂದು ಡಿಕೆಶಿ ಅವರು ವೀಕೆಂಡ್ ವಿತ್ ರಮೇಶ್ನಲ್ಲಿ ಮಾತನಾಡಿದ್ದಾರೆ.