ಬೆಂಗಳೂರು: ವಿದ್ಯುತ್ ಬೆಲೆ ಏರಿಕೆ ವಿರುದ್ಧ ಹೋರಾಟದ ಬಗ್ಗೆ ಮಾತನಾಡುತ್ತಾ ‘ನಾವು ಎಲ್ಲಿ ವಿದ್ಯುತ್ ಬೆಲೆ ಏರಿಕೆ ಮಾಡಿದ್ದೇವೆ? ಅವರದೇ ಸರ್ಕಾರ ಇದ್ದಾಗ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ಚುನಾವಣೆ ಫಲಿತಾಂಶ ಬರುವುದಕ್ಕೂ ಮುನ್ನವೇ ಅವರು ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ವಿದ್ಯುತ್ ದರ ಪರಿಷ್ಕರಣ ಸಮಿತಿ ಬೆಲೆ ನಿಗದಿಯಲ್ಲಿ ಸ್ವಂತ ಅಧಿಕಾರ ಹೊಂದಿದೆ ಎಂದು ಮಾಧ್ಯಮಗಳ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ.
ಬಿಜೆಪಿಯವರು ಎಷ್ಟು ಹೊಸ ಬಿಲ್ ಗಳನ್ನು ಸೃಷ್ಟಿಸಿ ಹಣ ನೀಡಿದ್ದಾರೆ ಎಂದು ಹೇಳಿದರೆ ಎಷ್ಟು ಜನ ಮನೆಗೆ ಹೋಗುತ್ತಾರೆ ಗೊತ್ತಿದೆಯೇ? ಸಾವಿರಾರು ಕೋಟಿ ನೀಡಲಾಗಿದೆ. ಈ ವಿಚಾರಗಳು ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ತಿಳಿದಿದೆ. ರಾಜ್ಯದಲ್ಲಿ ವಿದ್ಯುತ್ ಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ.
ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬೇರೆ ರಾಜ್ಯಗಳಿಗೆ ನೀಡಿರುವ ಬಗ್ಗೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಇಲ್ಲದೆ 3500 ಕೋಟಿ ಮೊತ್ತದ ವಿದ್ಯುತ್ ಹೇಗೆ ಮಾರಲಾಯಿತು?
ಕುಮಾರಣ್ಣ ಅವರು ಮಾತನಾಡಲಿ, ನಾನು ಅವರ ಸಲಹೆ ಪಡೆಯುತ್ತೇನೆ. ವಿದ್ಯುತ್ ನಿಗಮದವರು ಜನವರಿಯಿಂದ ಇದನ್ನು ಜಾರಿಗೆ ಮುಂದಾಗಿದ್ದು, ಇದರಿಂದ ವಿದ್ಯುತ್ ಬಿಲ್ ಹೆಚ್ಚಾಗಿ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಚಿವರು, ನಾವು ಕೂತು ಚರ್ಚೆ ಮಾಡಿ ತೀರ್ಮಾನ ಮಾಡಿ ಪರಿಹಾರ ನೀಡುತ್ತಾರೆ. ನಾವು ಕೊಟ್ಟ ಮಾತಿನಂತೆ ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತೇವೆ’ ಎಂದು ತಿಳಿಸಿದರು.