ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ಘಟನೆ ನಡೆದಿದೆ.
ಸುಮಾರು 27 ವರ್ಷದ ಅಮೃತಾ ಶರ್ಮ ಅಪಾರ್ಟ್ಮೆಂಟ್ ನ ಹತ್ತನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ನಡೆದ ಘಟನೆಯಾಗಿದ್ದು ಸ್ಥಳೀಯರು ಯುವತಿಯನ್ನ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಅಮೃತಾ ಶರ್ಮ.
ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆಗೆ ಮೃತದೇಹ ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಅಮೃತಾ ಎರಡು ವರ್ಷದ ಹಿಂದೆ ವಿವಾಹವಾಗಿದ್ದರು ಹಾಗೆ ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ತುಂಬಾ ನೊಂದಿದ್ದರು. ಸದ್ಯ ಲಖನೌನಿಂದ ಮೃತಳ ತಾಯಿ ಆಗಮಿಸುತಿದ್ದು ಯಲಹಂಕ ನ್ಯೂಟೌನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.