ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಆರಂಭವಾಗಿ ಕೆಲ ದಿನಗಳು ಮಾತ್ರವೇ ಆಗಿದೆ. ಆದರೆ ಆಗಲೆ ಬಿಗ್ ಬಾಸ್ ವಿರುದ್ಧ ದೂರು ದಾಖಲಾಗಿದೆ.
ಬಿಗ್ ಬಾಸ್ ಸೀಸನ್ 11 ಓಪನಿಂಗ್ ಪಡೆದುಕೊಂಡಿದ್ದು ಒಟ್ಟು 17 ಸ್ಪರ್ಧಿಗಳು ದೊಡ್ಮನೆ ಒಳಿಗೆ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ್ಬಾಸ್ ಶೋ ವಿರುದ್ಧ ವಕೀಲೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ನೀಡಿದ್ದಾರೆ.
ಬಿಗ್ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ. ಪ್ರಸ್ತುತ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ.
ಆ ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿರುವುದು ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಲಗುವ ವ್ಯವಸ್ಥೆ ನೀಡದೆ ಅವರನ್ನು ದೈಹಿಕ ಬಾದೆ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ಬಿಗ್ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳೊಂದಿಗೆ ಕಾನೂನು ಬದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದು ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನ ಬಾಹಿರವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.