ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ CM ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವ ರಾಜ್ಯಪಾಲರ ನಡೆ ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯಪಾಲರು ಬಿಜೆಪಿ ಕೈ ಗೊಂಬೆಯಾಗಿ ಕುಣಿಯುತ್ತಿದ್ದಾರೆ ಎಂದು ಕಿಡಿಕಾರಿರುವ ಕೈ ಕಾರ್ಯಕರ್ತರು, ರಾಜ್ಯಪಾಲರ ಬಿತ್ತಿಪತ್ರಗಳನ್ನ ರೆಡಿ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯರವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರೋದನ್ನ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ರಾಜ್ಯದ ರಾಜ್ಯಪಾಲರು ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಅಸಂವಿಧಾನಿಕ ನಡೆ ಎಂದು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ಡಿಸಿಸಿಗಳ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ಮತ್ತು ರಾಜ್ಯಪಾಲರ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.
ಪ್ರತಿಭಟನೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಕಾರ್ಯಾಧ್ಯಕ್ಷರುಗಳು, ಸಚಿವರು, ಸಂಸದರು, ಶಾಸಕರು, ಸೇರಿ ಮಾಜಿ ಸಚಿವರು, ಮಾಜಿ ಶಾಸಕರು, ಲೋಕಸಭೆ ಅಭ್ಯರ್ಥಿಗಳು ಭಾಗಿಯಾಗಿದ್ದಾರೆ.