ಬೆಂಗಳೂರು:- ಶಕ್ತಿ ಯೋಜನೆ ನಡೆಸೋದು ಸ್ವಲ್ಪ ಕಷ್ಟವಾಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ನಡೆಸುವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ.
ಆದರೆ, ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ. ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆ ಅಡಿ ನೇರನಗದು ವರ್ಗಾವಣೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲ ಮಹಿಳೆಯರಿಗೂ ಇದರ ಪ್ರಯೋಜನ ದೊರೆಯುತ್ತಿದೆ. ಈ ಯೋಜನೆ ಅಡಿ ಯಾವ ಮಹಿಳೆಯರು ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹೀಗಾಗಿ ಇದನ್ನು ನಡೆಸುವುದು ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೂ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ