ಬೆಂಗಳೂರು: ಕಂಡಕ್ಟರ್ 1 ರೂ. ಚಿಲ್ಲರೆ ನೀಡಿಲ್ಲ ಅಂತ ಕೋರ್ಟ್ ಮೊರೆ ಹೋಗಿದ್ದ ವ್ಯಕ್ತಿಗೆ 2000 ರೂ. ಪರಿಹಾರ ಘೋಷಿಸಿ ಬೆಂಗಳೂರಿನ ಗ್ರಾಹಕ ನ್ಯಾಯಾಲಯ ಆದೇಶಿಸಿದೆ. ಕಂಡಕ್ಟರ್ ಚಿಲ್ಲರೆ ನೀಡದ್ದರಿಂದ ರಮೇಶ್ ನಾಯಕ್ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೊರೆ ಹೋಗಿ 15,000 ರೂ. ಪರಿಹಾರ ಕೋರಿದ್ದರು. ಇದೀಗ ನ್ಯಾಯಾಲಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2000 ರೂ. ಪರಿಹಾರ ನೀಡುವಂತೆ ಆದೇಶ ನೀಡಿದೆ.
ದೂರುದಾರರ ಕಾನೂನು ಶುಲ್ಕಕ್ಕೆ 1,000 ರೂ. ಪಾವತಿಸುವಂತೆ ನ್ಯಾಯಾಲಯವು ಸೂಚಿಸಿದೆ. ನ್ಯಾಯಾಲಯದ ಆದೇಶದ ಪ್ರಕಾರ ಬಸ್ಸಿನ ಕಂಡಕ್ಟರ್ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಚಿಲ್ಲರೆ ನೀಡದೇ ಇರುವುದನ್ನು ಬಿಎಂಟಿಸಿಯ ಕಚೇರಿಗೆ ತಿಳಿಸಿದಾಗಲೂ ಬಾಕಿ ಮೊತ್ತವನ್ನು ನೀಡಲ್ಲ. ಇದು ಗ್ರಾಹಕರ ಹಕ್ಕಿನ ವಿಷಯವಾಗಿ ಮೆಚ್ಚುಗೆ ಹಾಗೂ ಮಾನ್ಯತೆಯನ್ನು ಪಡೆಯುತ್ತಿದೆ. ಅಂತಹ ಸಂದರ್ಭದಲ್ಲಿ ದೂರುದಾರರು ಪರಿಹಾರದ ಮರುಪಾವತಿಗೆ ಅರ್ಹರಾಗಿರುತ್ತಾರೆ ಎಂದು ನ್ಯಾಯಾಲಯ ಹೇಳಿದೆ ಅದೇಶದಲ್ಲಿ ಉಲ್ಲೇಖಿಸಿದೆ.