ಬೆಂಗಳೂರು ; ರಾಜಧಾನಿ ಬೆಂಗಳೂರಿನಲ್ಲಿ ಯುಪಿಎಸ್ಸಿ ಟಾಪರ್ಸ್ ಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 2022 ನೇ ಸಾಲಿನ ಇನ್ಸೈಡ್ ಐಎಎಸ್ ಸಂಸ್ಥೆಯ ಯುಪಿಎಸ್ಸಿ ಟಾಪರ್ಸ್ಗೆ ನಡೆದ ಅಭಿನಂದನೆ ಕಾರ್ಯಕ್ರಮವು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಇನ್ಸೈಡ್ ಐಎಎಸ್ ಸಂಸ್ಥಾಪಕ ವಿನಯ್ , ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.