ಬೆಂಗಳೂರು: ಕಾಂಗ್ರೆಸ್ ಬಿಜೆಪಿಗೆ ಆತಂಕ ಶುರುವಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿಗೆ ಅಧಿಕಾರಕ್ಕೆ ಬರುವ ಸ್ಪಷ್ಟ ಭರವಸೆ ಇಲ್ಲ. ಎರಡೂ ಪಕ್ಷಗಳಿಗೆ ಆತಂಕ ಶುರುವಾಗಿದೆ. ಜೆಡಿಎಸ್ನವರು ಎಲ್ಲಿ ಬಿಜೆಪಿ ಜೊತೆ ಹೋಗ್ತಾರೆ ಅಂತ ಕಾಂಗ್ರೆಸ್ನವರಿಗೆ, ಕಾಂಗ್ರೆಸ್ ಜೊತೆ ಎಲ್ಲಿ ಹೋಗ್ತಾರೆ ಅಂತ ಬಿಜೆಪಿಯವರಿಗೆ. ಹೀಗಾಗಿ ಪದೇ ಪದೆ ನಮ್ಮನ್ನ ಕೆಣಕುತ್ತಾರೆ. ನಾನು ಈ ಬಾರಿ 123 ಗುರಿಯಿಟ್ಟು ಹೊರಟಿದ್ದೇವೆ.
ಇದು ನಿಮಗೆ ಹಾಸ್ಯವಾಗಿ ಲಘುವಾಗಿ ಕಾಣಬಹದು. ಈಗಾಗಲೇ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹಳ್ಳಿ ಹಳ್ಳಿಗೆ ಜನತಾ ಜಲಧಾರೆ, ಪಂಚರತ್ನ ರಥಯಾತ್ರೆ ಮೂಲಕ ತಲುಪಿದ್ದೇನೆ ಎಂದು ಹೇಳಿದರು. ಇನ್ನೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದ ಇರುವ ಬಗ್ಗೆ ಸಂಶಯ ಇಟ್ಟುಕೊಳ್ಳಬೇಡಿ. ಯಾರು ಮೈತ್ರಿ ಸರ್ಕಾರ ಕೆಡವಲು ಹಣ ಹೂಡಿಕೆ ಮಾಡಿದವರಿಗೆ, ಎರಡು ಪಕ್ಷದವರು ರಕ್ಷಣೆ ಕೊಡುತ್ತಿದ್ದಾರೆ. ಇದಕ್ಕಿಂತಲೂ ಉದಾಹರಣೆ ಬೇಕಾ?. ಮದ್ದೂರಿನಲ್ಲಿ ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದಾರಲ್ಲ? ಎಂದು ಕಿಡಿಕಾರಿದರು.