ಛತ್ತೀಸ್ಗಢ: ಕಾಂಗ್ರೆಸ್ ಪಕ್ಷ ಹಾಗೂ ಅಭಿವೃದ್ದಿ ಎರಡೂ ಒಟ್ಟಿಗೆ ಇರಲು ಸಾಧ್ಯವೇ ಇಲ್ಲ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಛತ್ತೀಸ್ಗಢ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕನ್ಕೇರ್ ಎಂಬಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಛತ್ತೀಸ್ಗಢ ರಾಜ್ಯದ ಹಿತಾಸಕ್ತಿ ಕಾಪಾಡೋದು, ರಾಜ್ಯವನ್ನು ಬಲಪಡಿಸೋದು ಹಾಗೂ ರಾಜ್ಯದ ಬುಡಕಟ್ಟು ಹಾಗೂ ಹಿಂದುಳಿದ ಸಮುದಾಯದ ಹಕ್ಕುಗಳನ್ನು ರಕ್ಷಿಸೋದು ಬಿಜೆಪಿಯ ಪ್ರಾಥಮಿಕ ಉದ್ದೇಶ ಎಂದು ಪ್ರಧಾನಿ ಮೊದಿ ಹೇಳಿದ್ದಾರೆ. ಛತ್ತೀಸ್ಗಢ ರಾಜ್ಯದ ಕಾಂಗ್ರೆಸ್ ಪಕ್ಷದ ಸರ್ಕಾರವು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರು ಹಾಗೂ ಸಚಿವರು ತಮ್ಮ ಸ್ವಂತ ಲಾಭಕ್ಕೆ ಕಾರ್ಯ ನಿರ್ವಹಿಸುತ್ತಿದ್ಧಾರೆ ಎಂದು ಹರಿಹಾಯ್ದರು.