ಲಕ್ನೋ:- ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ಷರಿಯಾ ಕಾನೂನನ್ನು ಜಾರಿಗೊಳಿಸುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ ಎಂದರು.
ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ. ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ಈಗ ನಿಮ್ಮ ಬಳಿಗೆ ಬಂದಿವೆ. ನೀವೇ ಹೇಳಿ, ಈ ದೇಶವನ್ನು ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸುತ್ತದೆಯೇ? ಅಥವಾ ಷರಿಯತ್ ನಡೆಸುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಮರುಹಂಚಿಕೆ ವಿಚಾರ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್ನವರು ತಮ್ಮ ಪ್ರಣಾಳಿಕೆಯಲ್ಲಿ ವೈಯಕ್ತಿಕ ಕಾನೂನು ಜಾರಿಗೆ ತರುವುದಾಗಿ ಹೇಳುತ್ತಾರೆ. ಮೋದಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸಿದ್ದಕ್ಕೆ ಅವರು ಈ ತೀರ್ಮಾನ ಮಾಡಿದ್ದಾರೆ ಎಂದು ಅವರು ಆಕ್ರೋಶ ಹೊರ ಹಾಕಿದರು.