ಹುಬ್ಬಳ್ಳಿ:- ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್, ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೇಳಿರುವುದದು ಸತ್ಯ,
ಅದರೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗುರುವುದಾಗಿ ಹೇಳಿ ಕಾಂಗ್ರೆಸ್ ಯಾವತ್ತಿಗೂ ಹೈಕಮಾಂಡ್ ಆಧಾರಿತ ಪಕ್ಷ, ಅದು ಹಾಕಿದ ಗೆರೆಯನ್ನು ಯಾರೂ ದಾಟುವುದಿಲ್ಲ ಎಂದು ಹೇಳಿದರು. ಉಪ ಚುನಾವಣೆ ನಡೆಯುವ ಎಲ್ಲ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸ ಅವರು ವ್ಯಕ್ತಪಡಿಸಿದರು.