ಮಂಗಳೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಹಲ್ಲೆ ನಡೆಸಲು ಪೊಲೀಸರ ಮೇಲೆ ಒತ್ತಡ ಹಾಕಿದ ವಿಚಾರವಾಗಿ ರಾಜಕೀಯ ಕೆಸರೆರೆಚಾಟ ಶರುವಾಗಿದೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ದೌರ್ಜನ್ಯ ನಡೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರೇ, ಬಿಜೆಪಿ ನಾಯಕರ ಒತ್ತಡದಿಂದಲೇ ಪೊಲೀಸರು ದೌರ್ಜನ್ಯವೆಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಈ ನಡುವೆ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದಾಳಿಯು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮುಂದಿನ 5 ವರ್ಷ ಹಿಂದೂಗಳ ಮೇಲೆ ಏನು ಮಾಡುತ್ತೆ ಅನ್ನೋದರ ಸ್ಯಾಂಪಲ್ ಎಂದ ಕಲ್ಲಡ್ಕ ಪ್ರಭಾಕರ್ ಭಟ್. ನಾಳೆಯೇ ಸಿದ್ದರಾಮಯ್ಯನವರು ಸಿಎಂ ಪ್ರಮಾಣವಚನ ಸ್ವೀಕರಿಸುವ ಮುನ್ನವೇ
ಕಟೀಲ್ ಲೋಕಸಭಾ ಸದಸ್ಯನಾಗಿ ಕಾರ್ಯಕರ್ತರಿಗೆ ಸಾಯುವ ಹಾಗೆ ಹೊಡಿಸ್ತಾರೆ ಅಂದ್ರೆ ಅವರಿಗೆ ಮಾನವೀಯತೆ ಇದ್ಯಾ? ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮುಂದಿನ 5 ವರ್ಷ ಹಿಂದೂಗಳ ಮೇಲೆ ಏನು ಮಾಡುತ್ತೆ ಎನ್ನುವುದಕ್ಕೆ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಹಲ್ಲೆ ಮಾಡಿರುವ ಈ ಘಟನೆಯೆ ಒಂದು ಸಾಕ್ಷಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿಕಾರಿದ್ದಾರೆ.