ಬೆಂಗಳೂರು: ಕಾಂಗ್ರೆಸ್ ಅವರಿಗೆ ದಲಿತ ಸಮುದಾಯದವರ ಮೇಲೆ ಕಾಳಜಿ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಆರ್ ಟಿ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಟ್ವೀಟ್ ಮಾಡಿ ಮೀಸಲಾತಿ ಸಂವಿಧಾನಬಾಹಿರ ಕಾನೂನು ಎಂದು ಹೇಳಿದ್ದಾರೆ. ಇದು ಆ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು. ಕಾಂಗ್ರೆಸ್ನವರು ಕೆಳಮಟ್ಟದ ಪದ ಬಳಕೆ ಮಾಡಿದ್ದಾರೆ. ಕಾಂಗ್ರೆಸ್ನವರಿಗೆ ಅಂಬೇಡ್ಕರ್ ಮೇಲೆ ಪ್ರೀತಿ ಇಲ್ಲ.
ಆ ಸಮುದಾಯದ ಮೇಲೆ ಕಾಳಜಿ ಇಲ್ಲ ಎಂದು ಟೀಕಿಸಿದರು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಬಂದ ತಕ್ಷಣ ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಕಾಯಿದೆ ತಂದು ಜಾರಿ ಮಾಡಿದ್ದೇವೆ ಎಂದು ಹೇಳಿದರು. ವೋಟ್ ಬ್ಯಾಂಕ್ ಎಂದು ತಿಳಿದುಕೊಂಡು ಸದಾಕಾಲ ಮೋಸ ಮಾಡಿ ಕಾಂಗ್ರೆಸ್ ನಾಯಕರಿಗೆ ಸೋಲಿನ ಭೀತಿ ಕಾಡುತ್ತಿದೆ. ಹತಾಶರಾಗಿ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿಚಾರಗಳನ್ನು ವಿರೋಧ ಮಾಡುತ್ತಿದ್ದಾರೆ ಎಂದು ದೂರಿದರು.