ಈ ಸಲ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಳ್ಳುತ್ತಾರೆ. ನಂತರ ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರ ಜೊತೆಗೆ ಅವರು ಮಾತನಾಡುವಾಗ, ಮಾ. 12ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು, ಲೋಕಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದರ ಬಗ್ಗೆ ಕೇಳಿದ್ದಕ್ಕೆ ಅವರ ಮೇಲಿನಂತೆ ಉತ್ತರಿಸಿದರು. “ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಳ್ಳುವುದು ಸತ್ಯ. ಆದಾದ ನಂತರ ಬಹುದೊಡ್ಡ ಪ್ರಮಾಣದಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ
ಸರ್ಕಾರ ಪತನವಾಗುತ್ತೆ. ಈ ಬಗ್ಗೆ ಹಿಂದೇನೂ ಹೇಳಿದ್ದೆ ಈಗಲೂ ಹೇಳ್ತಾ ಇದ್ದೇನೆ” ಎಂದು ಹೇಳಿದರು.
ಫೆ. 3ರಂದು ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಟೆಂಗಿನಕಾಯಿ, “ಈ ಬಾರಿಯ ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಒಂದು ಮಹತ್ವದ ಬದಲಾವಣೆಯಂತೂ ಖಂಡಿತವಾಗುತ್ತದೆ” ಎಂದು ಅವರು ಆಗ