ಮಡಿಕೇರಿ: ಡಿಕೆ ಶಿವಕುಮಾರ್-ಸಿದ್ದರಾಮಯ್ಯ (DK Sivakumar-Siddaramaiah)ಸಮ್ಮಿಶ್ರ ಸರ್ಕಾರ ತುಂಬಾ ದಿನ ಉಳಿಯಲ್ಲ. ಸಂಸತ್ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ. ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ. ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ಜನರು ಗೊಂದಲದಲ್ಲಿದ್ದಾರೆ. ಪ್ರಧಾನಿ ಮೋದಿಯವರನ್ನು ತೆಗಳುವುದರ ಮೂಲಕ ವಿಷಯಾಂತರ ಮಾಡಲಾಗುತ್ತಿದೆ.
ಬೆಲೆ ಏರಿಕೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿ ಅಂತಾರೆ. ಮೋದಿ ಟೊಮ್ಯಾಟೋ ಬೆಲೆ ಏರಿಕೆ ಮಾಡಿದ್ರಾ. ಬೆಲೆ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ. ಸರ್ಕಾರದ ವಿರುದ್ಧ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಎಂದು ಮಡಿಕೇರಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅಶೋಕ್(Ashok) ಹೇಳಿದರು.