ಬೆಂಗಳೂರು: ದೆಹಲಿ ಮಾದರಿಯ ಗ್ಯಾರಂಟಿ ಈಡೇರಿಸಲು ನಮ್ಮ ಸಹಕಾರ ಇದ್ದೇ ಇದೆ ಎಂದು ಎಎಪಿ ಮುಖಂಡ ಬ್ರಿಜೇಶ್ ಕಾಳಪ್ಪ(Brijesh Kalappa) ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಎಎಪಿ (AAP)ಕಚೇರಿಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಮತ್ತು ಗ್ಯಾರಂಟಿಗಳು ಆಮ್ ಆದ್ಮಿ ಪಕ್ಷದ ಶೇ 90 ನಕಲು ಆಗಿವೆ. ಇವುಗಳನ್ನು ರಾಜ್ಯದ ಜನತೆಗೆ ಸಂಪೂರ್ಣವಾಗಿ ತಲುಪಿಸಲು ನಾವು ಸದಾ ಸಿದ್ಧರಿದ್ದೇವೆ ಎಂದರು. ಇನ್ನೂ ರೈತರ ಆದಾಯ ದ್ವಿಗುಣ,
ಸರ್ವರಿಗೂ ವಸತಿ, ವಿದೇಶಗಳಲ್ಲಿನ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೂ 15ಲಕ್ಷ, ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡಿಕೆ, ಐದು ಟ್ರಿಲಿಯನ್ ಆರ್ಥಿಕತೆ, ಬುಲೆಟ್ ಟ್ರೈನ್, ಪೆಟ್ರೋಲ್ ಡೀಸೆಲ್ ಬೆಲೆ ಇಳಿಸುವಲ್ಲಿ ವೈಫಲ್ಯ, ಬೆಲೆ ಏರಿಕೆಯಂತಹ ಯಾವುದೇ ಆಶ್ವಾಸನೆಗಳನ್ನು ಇದುವರೆಗೂ ಈಡೇರಿಸದೇ ನೈತಿಕತೆ ಇಲ್ಲದೆ ಬಿಜೆಪಿಯವರು ಏಕಾಏಕಿ ರಾಜ್ಯದ ಶಾಂತಿಗೆ ಭಂಗ ತರುವ ರೀತಿಯಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಖಂಡಿಸಿದರು.