ಬೆಂಗಳೂರು: ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆಶಿ ಆಯ್ಕೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (MLA Lakshman Savadi)ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಒಳ್ಳೆಯ ನಿರ್ಧಾರವನ್ನೇ ತೆಗೆದುಕೊಂಡಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದಾರೆ.
ಅಮಿತ್ ಶಾ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ: ಗೆಲ್ಲಿಸಿ ದೊಡ್ಡ ವ್ಯಕ್ತಿಯನ್ನಾಗಿ ಮಾಡುತ್ತೇವೆ ಎಂದಿದ್ದರು!
ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡುತ್ತಾರೆ. ನಾನು ಯಾವುದೇ ಸಚಿವಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದೇನೆ. ಹೈಕಮಾಂಡ್ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಯಾವುದೇ ಷರತ್ತು ಹಾಕಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿಲ್ಲ ಎಂದರು.