ಬೆಂಗಳೂರು: ಕಾಂಗ್ರೆಸ್ ಸುಳ್ಳುಗಾರರು, ಮೋಸಗಾರರ ಪಾರ್ಟಿ ಎಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ವಾಗ್ದಾಳಿ ನಡೆಸಿದರು. ಚುನಾವಣೆ ವೇಳೆ ಕಾಂಗ್ರೆಸ್ನವರು ಗ್ಯಾರಂಟಿ ಘೋಷನೆ ಮಾಡಿದ್ದರು.
ಅಧಿಕಾರಕ್ಕೆ ಬಂದು 20 ದಿನಗಳಾದರೂ ಗ್ಯಾರಂಟಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಜನರನ್ನು ಮೂರ್ಖರನ್ನಾಗಿ ಮಾಡಿದೆ, ಕ್ಷಮೆ ಕೇಳಲಿ. ಜನ ಕರೆಂಟ್ ಬಿಲ್ ಕಟ್ಟುತ್ತಿಲ್ಲ, ಬಸ್ಗಳಲ್ಲಿ ಟಿಕೆಟ್ ಪಡೆಯುತ್ತಿಲ್ಲ. ಅಡ್ಡ ದಾರಿಯಲ್ಲಿ ಕಾಂಗ್ರೆಸ್ ಅಧಿಕಾರ ಬಂದಿದೆ.
ಮೋದಿ ಎಲ್ಲೂ $15 ಲಕ್ಷ ಕೊಡುವ ಗ್ಯಾರಂಟಿ ಕಾರ್ಡ್ ಕೊಟ್ಟಿಲ್ಲ. ಕಪ್ಪು ಹಣ ತಂದರೆ 15 ಲಕ್ಷ ರೂ. ಕೊಡ್ತೇವೆ ಅಂತಷ್ಟೇ ಹೇಳಿದ್ದಾರೆ. ಗ್ಯಾರಂಟಿ ಜಾರಿ ಮಾಡದಿದ್ರೆ BJP ಹೋರಾಟ ಮಾಡಲಿದೆ ಎಂದರು.