ಮೈಸೂರು: ಗ್ಯಾರಂಟಿ ಗೊಂದಲ ಡೈವರ್ಟ್ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದೇ ಕಾರಣಕ್ಕೆ ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಮಾತನಾಡಿದ್ದಾರೆ ಎಂದು ಮೈಸೂರಿನಲ್ಲಿ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಆರೋಪ ಮಾಡಿದ್ದಾರೆ. ಒಂದು ಕೋಮಿನವರನ್ನು ಓಲೈಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.
ತಮಗೆ ಮತ ನೀಡಿದ್ದಾರೆ ಎಂಬ ಕಾರಣಕ್ಕೆ ಅವರ ಪರ ನಿರ್ಣಯ ಮಂಡಿಸಿದೆ. ಈ ಮೂಲಕ ಕಾಂಗ್ರೆಸ್ ಬಹುಸಂಖ್ಯಾತರ ಭಾವನೆಗೆ ಧಕ್ಕೆ ತರುತ್ತಿದೆ. ಕಾಂಗ್ರೆಸ್ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡ್ತೇವೆ ಎಂದು ಮೈಸೂರಿನಲ್ಲಿ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ತಿಳಿಸಿದರು.