ಬೆಂಗಳೂರು: ರಾಜ್ಯದಲ್ಲಿ ರಾಮ ಮಂದಿರದ ರಾಜಕೀಯ ವಾಕ್ಸಮರದ ಕಾವು ಜೋರಾಗ್ತಿದೆ, ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆಡಿದ್ದ ಮಾತು ವಿವಾದದ ಕಿಡಿ ಹೊತ್ತಿಸಿದೆ. ಹೆಗಡೆ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೆರಳಿ ಕೆಂಡವಾಗಿದ್ದು ವಾಗ್ದಾಳಿ ನಡೆಸ್ತಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಮಾತ್ರ ಹೆಗಡೆ ಬೆಂಬಲಕ್ಕೆ ನಿಂತಿದ್ರೆ ಇನ್ನುಳಿದ ಕೇಸರಿ ನಾಯಕರು ನೋ ರಿಯಾಕ್ಷನ್ ಅಂತಿದ್ದಾರೆ. ಈ ಮಧ್ಯೆ ಬಿಜೆಪಿ ನಾಯಕರು ಮೋದಿ ಕೊಟ್ಟ ದೇವಸ್ಥಾನ ಸ್ವಚ್ಛತಾ ಅಭಿಯಾನದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ..
ರಾಜ್ಯದಲ್ಲಿ ರಾಮ ಮಂದಿರ ಉದ್ಘಾಟನಾ ರಾಜಕೀಯದ ಕಾವು ಅದ್ಯಾಕೊ ತಣ್ಣಗಾಗುವಂತೆ ಕಾಣ್ತಿಲ್ಲ, ನೆನ್ನೆ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಸಿಎಂ ಸಿದ್ದರಾಮಯ್ಯರ ವಿರುದ್ಧ ಮಾತನಾಡಿ ಹೊತ್ತಿಸಿದ ವಿವಾದದ ಕಾವು ಜೋರಾಗ್ತಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟ ದೇವಸ್ಥಾನ ಸ್ವಚ್ಚತಾ ಅಭಿಯಾನದಲ್ಲಿ ಬಿಜೆಪಿ ನಾಯಕರು ಬ್ಯುಸಿಯಾಗಿದ್ದು ವಿಪಕ್ಷ ನಾಯಕ ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಸಂಸದರು, ಶಾಸಕರು ಸೇರದಂತೆ ಕೇಸರಿ ನಾಯಕರು ತಮ್ಮ ಕ್ಷೇತ್ರದಲ್ಲಿ ತಾವೇ ಪೊರಕೆ ಹಿಡಿದು ನೀರು ಹಾಕಿ ಸ್ವಚ್ಚತೆ ಮಾಡಿದ್ರು.
ನಂತ್ ಕುಮಾರ್ ಹೆಗಡೆ ಹೇಳಿಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಕ್ರೋಶ ಹೊರಹಾಕಿದ್ದಾರೆ ಅನಂತ್ ಕುಮಾರ್ ಹೆಗಡೆ ಹದ್ದು ಮೀರಿ ವರ್ತಿಸುತ್ತಿದ್ದಾರೆ. ಲಕ್ಷ್ಮಣ ರೇಖೆ ದಾಟಿ ಮಾತನಾಡುತ್ತಿ ದ್ದಾರೆ ಇಷ್ಟುದಿನ ನಾಪತ್ತೆಯಾದವರು ಈಗ ದಿಢೀರ್ ಪ್ರತ್ಯಕ್ಷರಾಗಿದ್ದಾರೆ, ಲೋಕಸಭೆ ಚುನಾವಣೆ ದೃಷ್ಟಿಯಿಂದ ತುಂಬಾ ಆ್ಯಕ್ಟೀವ್ ಆಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೋದಿ ತಮ್ಮ ಜಿಲ್ಲೆಗೆ ಬಂದಾಗ ಇವರು ಎಲ್ಲಿ ಹೋಗಿದ್ದರು ಈಗ ಬಂದು ಬಾಯಿಗೆ ಬಂದಂತೆ ಮಾತಾಡ್ತಿದ್ದಾರೆ ಸಂವಿಧಾನಿಕ ಹುದ್ದೆಯಲ್ಲಿದ್ದವರ ಮೇಲೆ ಈ ರೀತಿ ಮಾತಾಡೋದು ಸರಿಯಲ್ಲ ಅಂತ ಕಿಡಿಕಾರಿದ್ದಾರೆ ಶೆಟ್ಟರ್.
ಹೆಗಡೆ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ ಅನಂತಕುಮಾರ್ ಹೆಗಡೆ ನಾಲಿಗೆ ಮೇಲೆ ಹಿಡಿತ ಇರಲಿ. ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಆಸ್ತಿ ಅಲ್ಲ, ನಮ್ಮ ಎದೆ ಬಗೆದರೆ ರಾಮನೂ ಇದ್ದಾನೆ, ಸಿದ್ದರಾಮಯ್ಯ, ದೇವರಾಜ್ ಅರಸ್ ಕೂಡ ಇದ್ದಾರೆ. ನಿನ್ನ ರಕ್ತದಲ್ಲಿ ಮಾತ್ರ ಹಿಂದೂ ಇರೋದಾ, ನಿಮ್ಮ ಅಪ್ಪನ ಮನೆ ಆಸ್ತಿ ಥರಾ ಆಡೋದನ್ನ ನಿಲ್ಲಿಸಿ. ನಾನ್ ಹೇಳ್ತಾ ಇದೀನಿ ಅನಂತ್ ಕುಮಾರ್ ಹೆಗಡೆಯವರೇ ಅಂತ ಆಕ್ರೋಶ ಹೊರಹಾಕಿದ್ದಾರೆ.