ಬೆಂಗಳೂರು:– ಕಳೆದ ವಿಧಾನಸಭಾ ಚುನಾವಣೆಯ ನನ್ನ ಸೋಲಿಗೆ ‘ಕೈ’ ಮುಖಂಡರೇ ಕಾರಣ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ರಾಜ್ಯದ ಅನೇಕ ಕಾಂಗ್ರೆಸ್ ನಾಯಕರು ನನ್ನ ಸೋಲಿಗೆ ಕಾರಣರಾಗಿದ್ದಾರೆ. ಕಾಂಗ್ರೆಸ್ ಮುಖಂಡರೇ ಜನಾರ್ದನರೆಡ್ಡಿ ಪರ ಕೆಲಸ ಮಾಡಿ ಸೋಲಿಸಿದ್ದಾರೆ. ನನಗೆ ಮಾಹಿತಿ ಇಲ್ಲದೆ ಕಾಂಗ್ರೆಸ್ ಸಭೆಗಳು ಆಗುತ್ತಿದೆ. ಅದಕ್ಕೆ ಯಾರು ಸಹ ಹೋಗಬೇಡಿ ಎಂದು ವಾಯ್ಸ್ ಮೆಸೇಜ್ ಮೂಲಕ ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿರುವ ಇಕ್ಬಾಲ್ ಅನ್ಸಾರಿ, ನನ್ನ ಸಮುದಾಯದ ಪ್ರತಿಯೊಂದು ಮನೆಗೆ ಹೋಗಿ ಮೋಸದ ಬಗ್ಗೆ ಅರಿವು ಮೂಡಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ದೊಡ್ಡ ರಾಜಕೀಯ ತಿರುವು ಆಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲೇ ತಮಗಾದ ಅನ್ಯಾಯದ ಬಗ್ಗೆ ತಮ್ಮ ಸಮುದಾಯದ ಪ್ರತಿ ಮನೆ ಮನೆಗೂ ಮುಟ್ಟಿಸುತ್ತೇನೆ ಎಂದು ಹೇಳಿರುವುದು ಕಾಂಗ್ರೆಸ್ನಲ್ಲಿ ತಲ್ಲಣ ಸೃಷ್ಟಿಸಿದೆ. ಇಕ್ಬಾಲ್ ಅನ್ಸಾರಿ ಮುಸ್ಲಿಂ ಸಮುದಾಯದ ಪ್ರಬಲ ನಾಯಕರಾಗಿದ್ದು, ಎಂಪಿ ಚುನಾವಣೆಯಲ್ಲಿ ದೊಡ್ಡ ರಾಜಕೀಯ ತಿರುವಾಗಲಿದೆ ಎಂದಿರುವುದು ಸಂಚಲನಕ್ಕೆ ಕಾರಣವಾಗಿದೆ.