ದೊಡ್ಡಬಳ್ಳಾಪುರ: ಸಿಎಂ ಸಿದ್ಧರಾಮಯ್ಯನವರ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ದೊಡ್ಡಬಳ್ಳಾಪುರದ ಕಾಂಗ್ರೆಸ್ ನಾಯಕರು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ದೊಡ್ಡಬಳ್ಳಾಪುರದ ಟಿಬಿ ಕ್ರಾಸ್ ಬಳಿ ಇರುವ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ದ ದಿಕ್ಕಾರ ಕೂಗಿದರು.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ದೂರಿನನ್ವಯ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಆದೇಶ ಹೊರಡಿಸಬಾರದು. ಬಿಜೆಪಿಯ ಏಜೆಂಟ್ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ ವರ್ಚಸ್ಸನ್ನು ತಾಳಲಾರದೇ ಬಿಜೆಪಿಗರು ಕುತಂತ್ರ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಏನಾದರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರೆ ರಾಜ್ಯದಲ್ಲಿ ಉಗ್ರ ಹೋರಾಟ ಮಾಡಿತ್ತೇವೆ, ಕೂಡಲೇ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಹಿಂದುಳಿದ ಜಾತಿಗಳ ಒಕ್ಕೂಟದ ನಾಯಕರು ಒತ್ತಾಯಿಸಿದರು.