ಚಿತ್ರದುರ್ಗ: 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಕಾವು ದಿನೇ ದಿನೇ ರಂಗೇರುತ್ತಿದೆ.ಅದರಂತೆ ಕೋಟೆನಾಡು ಚಿತ್ರದುರ್ಗದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಇಂದು ಸಾಮೂಹಿಕವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ, ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆಂದು ಭೇಟಿ ನೀಡಿದ ಸಂದರ್ಭದಲ್ಲಿ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷರಾದ ಶ್ರೀ. ಎಂ. ಜಯಣ್ಣ ಹಾಗು ಇತರ ಕಾರ್ಯಕರ್ತರು ಸ್ವಾಗತ ಕೋರಿದರು.
ಚಿತ್ರದುರ್ಗದ ಜೆಡಿಎಸ್ ಅಭ್ಯರ್ಥಿ ಜಿ. ರಘು ಆಚಾರ್ ಬೆಂಬಲಿಸಿ ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಸೈಯದ್ ವಲಿಯುಲ್ಲಾ ಶಾಖಾದ್ರಿ ಡಿ.ಎಸ್(ನೇತಾ), ಮಹಮದ್ ಖಲೀಲುಲ್ಲಾ, ಕಾರ್ಯದರ್ಶಿ ಮಹಮದ್ ಮೋಸಿನ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆಹಬೂಬ್ ಭಾಷಾ(ಆರ್.ಕೆ ರಿಯಾಜ್) ಹಾಗು ವಸೀಂ ಸೇರಿದಂತೆ ಹಲವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದರು.

ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ತಂದು ಕುಮಾರಣ್ಣನ ಸಿಎಂ ಮಾಡಬೇಕು. ಭ್ರಷ್ಟಾಚಾರದಲ್ಲಿ ಮುಳುಗಿರುವ ಈಗಿನ ಸರ್ಕಾರವನ್ನ ತೊಲಗಿಸಿ, ಈ ಬಾರಿ ಜೆಡಿಎಸ್ ಅಧಿಕಾರಕ್ಕೇ ತರಲೇಬೇಕು ಎಂದು ಹೇಳಿದರು.