ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ 8 ದಿನ ಮಾತ್ರ ಬಾಕಿಯಿದೆ. ಇದರ ನಡುವೆಯೇ ನಿನ್ನೆ ಅಷ್ಟೇ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇಂದು (ಮೇ 02) ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು (Congress Manifesto) ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ ಎನ್ನುವ ಘೋಷ ವಾಕ್ಯದೊಂದಿಗೆ ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್ ಬದ್ಧತೆ’ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆಗೊಳಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದರ ಜೊತೆಗೆ NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ ಮಾಡುವುದಾಗಿ ಹೇಳಿದೆ.
ಕಾಂಗ್ರೆಸ್ನ “ಸರ್ವ ಜನಾಂಗದ ಶಾಂತಿಯ ತೋಟ” ಪ್ರಣಾಳಿಕೆ ಮುಖ್ಯಾಂಶಗಳು
- ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್
- ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
- ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
- ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
- ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ
- ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
- ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
- ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ
- ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ
- ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ
- ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ
- ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ
- ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ
- ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ
- ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ
- ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ
- ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
- ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ಗಳಿಗೆ ಬಜೆಟ್ನಲ್ಲಿ ಅನುದಾನ ಹೆಚ್ಚಳ
- ಪ್ರತಿ ಗ್ರಾಮ ಪಂಚಾಯತ್ನಲ್ಲಿ ಹೈಸ್ಪೀಡ್ ವೈಫೈ ಹಾಟ್ಸ್ಪಾಟ್ ಸ್ಥಾಪನೆ
- ಪ್ರತಿ ವಿಭಾಗಕ್ಕೆ ಒಂದರಂತೆ ಕೃಷಿ ಬೆಲೆ ಆಯೋಗ ಸ್ಥಾಪನೆ
- ದ್ರಾಕ್ಷಿ ಬೆಳೆಗಾರರಿಗೆ ಸಬ್ಸಿಡಿ ಒದಗಿಸಲು 500 ಕೋಟಿ ರೂ.
- ರಬ್ಬರ್ ಕೃಷಿಗಾಗಿ 25 ಕೋಟಿ ರೂ. ವಿಶೇಷ ಪ್ಯಾಕೇಜ್
- ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ
- SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ಧ
- ಕರ್ನಾಟಕ ಕಾಫಿ ಉತ್ತೇಜನಕ್ಕಾಗಿ ಕಾಫಿ ಕರ್ನಾಟಕ ಬ್ರ್ಯಾಂಡ್ ಸೃಷ್ಟಿ
- ಸಾವಯವ ಕೃಷಿ ಉತ್ತೇಜನಕ್ಕಾಗಿ 2,500 ಕೋಟಿ ರೂ. ಹೂಡಿಕೆ
- ಪ್ರತಿ ಲೀಟರ್ ಹಾಲಿನ ಸಬ್ಸಿಡಿ 5 ರೂ.ನಿಂದ 7 ರೂ.ಗೆ ಏರಿಕೆ