ಬೆಂಗಳೂರು: ಕಾಂಗ್ರೆಸ್ ಪಕ್ಷ ಈಗಾಗಲೇ ನಿರ್ನಾಮವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್ (Minister Dr. CN Aswath Narayan) ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ(BJP) ಕಳೆದ ಮೂರೂವರೆ ವರ್ಷಗಳಲ್ಲಿ ಅಭಿವೃದ್ಧಿಯ ಮನ್ವಂತರವನ್ನೇ ಸೃಷ್ಟಿಸಿದೆ. ಪ್ರಧಾನಿ ಮೋದಿ(Prime Minister Modi) ಅವರ ದಕ್ಷ ನಾಯಕತ್ವದಲ್ಲಿ ಭಾರತ ಮತ್ತು ಕರ್ನಾಟಕ ಪ್ರಗತಿಯ ದಾಪುಗಾಲು ಇಡುತ್ತಿವೆ” ಎಂದರು. ಕಾಂಗ್ರೆಸ್ ಪಕ್ಷ ಈಗಾಗಲೇ ನಿರ್ನಾಮವಾಗಿದೆ.
ಅದು ಈಗ ತನ್ನ ಅಪಾಯಕಾರಿ ಪ್ರಣಾಳಿಕೆ ಮೂಲಕ ಸೆಲ್ಫ್ ಗೋಲ್ ಹೊಡೆದುಕೊಂಡು, ತಾನೇ ಕಾಂಗ್ರೆಸ್ ಮುಕ್ತ ವಾತಾವರಣ ಸೃಷ್ಟಿಸಿದೆ. ಈ ಬಾರಿಯ ಚುನಾವಣೆಯ ನಂತರ ಆ ಪಕ್ಷದ ಹೆಸರೂ ಉಳಿದುಕೊಳ್ಳುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪ್ರಣಾಳಿಕೆ ಜನರ ನಂಬಿಕೆಗಳಿಗೆ ಧಕ್ಕೆ ತರುವಂತಿದೆ. ಜನರು ಬಿಜೆಪಿ ಪರ ಒಲವು ಹೊಂದಿದ್ದು, ನಮಗೆ ಸ್ಪಷ್ಟ ಜನಾದೇಶ ಸಿಗಲಿದೆ. ಇದೇ 6ರಂದು ಮೋದಿಯವರು ಮಲ್ಲೇಶ್ವರದಲ್ಲಿ ಕೂಡ ರೋಡ್ ಶೋ ನಡೆಸಲಿದ್ದಾರೆ. ಇದರಲ್ಲಿ ಕ್ಷೇತ್ರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.