ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನ ಸಭೆ ಉಪ ಚುನಾವಣೆಯ ಪ್ರಚಾರ ಕಾರ್ಯಕ್ರಮ ಮುಗಿಸಿಕೊಂಡು ಭಾನುವಾರ ರಾತ್ರಿ ಹುಬ್ಬಳ್ಳಿ ಗೆ ಮರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ನಿವಾಸದಲ್ಲಿ ಭೋಜನ ಸವಿದರು.
ಸಂತೋಷನಗರ ಮಧುರಾ ಪಾರ್ಕ್ ನಲ್ಲಿರುವ ತಮ್ಮ ಮನೆಗೆ ಆಗಮಿಸುತ್ತಿದ್ದಂತೆ ಸಿದ್ದರಾಮಯ್ಯ ಅವರನ್ನು ಅಬ್ಬಯ್ಯ ಹಾಗೂ ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು ಸ್ವಾಗತಿಸಿದರು. ಶಿಗ್ಗಾಂವ ಉಪ ಚುನಾವಣಾ ಪ್ರಚಾರ ಮುಗಿಸಿ ನೇರವಾಗಿ ಹುಬ್ಬಳ್ಳಿಗೆ ಆಗಮಿಸಿದ ಅವರು ಮುಖ ್ಯ ಮಂತ್ರಿ ಸಿದ್ಧರಾಮಯ್ಯ ನವರು ನಾಟಿ ಕೋಳಿ ಸಾರು,ಮಟನ್ ಬಿರಿಯಾನಿ,ಖಡಕ್ ಜೋಳದ ರೊಟ್ಟಿ ಊಟ ಸವಿದರು. ಒಂದು ಕಡೆ ಸಸ್ಯಹಾರಿ ಇನ್ನೊಂದು ಕಡೆ ಮಾಂಸಹಾರಿ ಭರ್ಜರಿ ಬಗೆ ಬಗೆಯ ಉತ್ತರ ಕರ್ನಾಟಕ ಭಾಗದ ವಿಶೇಷ ಖಾದ್ಯದ ರುಚಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರು ಸವಿದರು
ಹುಬ್ಬಳ್ಳಿಯಲ್ಲಿರುವ ಶಾಸಕ ಪ್ರಸಾದ ಅಬ್ಬಯ್ಯ ಅವರ ಮನೆಗೆ ತೆರಳಿದ ಸಿಎಂ ಸಿದ್ಧರಾಮಯ್ಯಗೆ ಶಾಸಕ ಪ್ರಸಾದ ಅಬ್ಬಯ್ಯ ನಾಟಿ ಕೋಳಿ ಮತ್ತು ಮಟನ್ ಬಿರಿಯಾನಿ ಊಟ ಮಾಡಿಸಿದರು. ಈ ಸಂದರ್ಭದಲ್ಲಿ ಬಸವರಾಜ ಹೊರಟ್ಟಿ,ಮಾಜಿ ಸಚಿವ ಪಿ ಸಿ ಸಿದ್ಧನಗೌಡರ,ಶಾಸಕ ಎನ್ ಎಚ್ ಕೋನರೆಡ್ಡಿ ಮುಖಂಡ ರಾಜಶೇಖರ ಮೆಣಸಿನಕಾಯಿ ಹಾಗೂ ವಿಶಾಲ ಅಬ್ಬಯ್ಯ ಸೇರಿದಂತೆ ಹಲವು ಮುಖಂಡರು ಸಿಎಂ ಜೊತೆ ನಾಟಿ ಕೋಳಿ ರುಚಿ ಸವಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಎಚ್. ಕೆ. ಪಾಟೀಲ್, ಎಂಎಲ್ ಸಿ ನಜೀರ್ ಅಹ್ಮದ್, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ಇದ್ದರು. ಸಿಎಂ ಆಗಮನದ ಹಿನ್ನೆಲೆ ಅಬ್ಬಯ್ಯ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು